ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ಹಾಗೂ ಮೈಸೂರು – ಬೆಂಗಳೂರು ದಶಪಥ ರಸ್ತೆಯ ವೀಡಿಯೊಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
“ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ’ ಎಂದಿರುವ ಸಿಎಂ ಅವರ ಟ್ವೀಟ್ ಗೆ ಪ್ರಧಾನಿ ಮೋದಿಯವರು ಪ್ರತಿಕ್ರಿಯೆ ನೀಡುತ್ತಾ, ‘ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ” ಎಂದಿದ್ದಾರೆ.