ಫೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಜಾಮೀನು ಕೋರಿ ಮುರಘಾಶ್ರೀಗಳು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಆದೇಶ ಹೊರಡಿಸಿದ್ದಾರೆ.