ಬೆಂಗಳೂರಿಗೆ ಮಳೆಯಿಂದ ಆಗುವ ಅನಾಹುತ ತಪ್ಪಿಸಲು ರಾಜಕಾಲುವೆಗಳ ಅಭಿವೃದ್ಧಿಯನ್ನು ಸಮಗ್ರವಾಗಿ ಕೈಗೊಳ್ಳಲಾಗುತ್ತಿದ್ದು, ಜತೆಗೆ ಯಾವುದೇ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ಕೃಷ್ಣಬೈರೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾಲುವೆಗಳ ಮಾಸ್ಟರ್ ಪ್ಲಾನ್‌ನ್ನು ಮತ್ತೆ ಪರಿಷ್ಕರಿಸಿ ರಾಜಕಾಲುವೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕಾಲಮಿತಿಯಲ್ಲಿ 1,800 ಕೋಟಿ ರೂ. ವೆಚ್ಚದಲ್ಲಿ ರಾಜ ಕಾಲುವೆ ಅಭಿವೃದ್ಧಿಪಡಿಸುತ್ತೇವೆ ಎಂದರು.