ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ‌ ಸಿಎಂ: ಪ್ರಿಯಾಂಕ್

ಪ್ರಿಯಾಂಕ್ ಖರ್ಗೆ
Advertisement

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಿತ ಅನುದಾನವನ್ನೇ ಸರಿಯಾಗಿ ಬಿಡುಗಡೆ ಮಾಡದ ಸಿಎಂ ಮತ್ತೆ ರೂ. 5,000 ಕೋಟಿ ನೀಡುವುದಾಗಿ ಹೇಳಿ ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದೆ ಚುನಾವಣೆ ಬರುತ್ತಿದೆ. ಹಾಗಾಗಿ ಈ ಅನುದಾನ ಬಿಡುಗಡೆ ಅಸಾಧ್ಯ ಎಂದರು. ಸ್ಥಳೀಯ ಮುಖಂಡರ ನಿರಾಸಕ್ತಿಯಿಂದ ಕಲಬುರಗಿ ಅಭಿವೃದ್ಧಿಯಾಗಿಲ್ಲ ಎಂದು ಹೇಳುತ್ತಿರಿ, ನಿಮ್ಮ ಅವಧಿಯಲ್ಲಿ ಐವರು ಮುಖ್ಯಮಂತ್ರಿಗಳಾಗಿದ್ದಾರೆ. ಅವರ ಕೊಡುಗೆ ಏನು ಎಂದು ಪ್ರಿಯಾಂಕ್‌ ಪ್ರಶ್ನಿಸಿದರು.