ಮೈಸೂರು– ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

Advertisement

ಮಂಡ್ಯ: ಬಹುನೀರೀಕ್ಷಿತ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯದಲ್ಲಿ ಲೋಕಾರ್ಪಣೆಗೊಳಿಸಿದರು. ಬೆಂಗಳೂರು ಟು ಮೈಸೂರು ಸುಗಮ ಸಂಚಾರಕ್ಕಾಗಿ ನಿರ್ಮಾಣ ಆಗಿರುವ 118 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಲೋಕಾರ್ಪಣೆ ಆಗಿದೆ. 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎಕ್ಸ್‌ಪ್ರೆಸ್ ಹೈವೇಯನ್ನು ಮಂಡ್ಯ ಬಳಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.