ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದಾರೆ. ಶಿವಮೊಗ್ಗದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಮೋದಿಯವರು ಭಾಷಣ ಆರಂಭಿಸಿದರು.
ಇಂದು ಯಡಿಯೂರಪ್ಪ ಅವರ ಜನ್ಮದಿನವಾಗಿದೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ನೆರದಿದ್ದ ಜನರಿಗೆ ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಹುಟ್ಟು ಹಬ್ಬದ ಶುಭಾಶಯ ತಿಳಿಸಲು ಹೇಳಿದರು.
ಬಿಎಸ್ವೈ ಅವರು ವಿಧಾನಸಭೆಯಲ್ಲಿ ಭಾಷಣ ಮಾಡಿದ್ದು ಅದು ಎಲ್ಲರಿಗೂ ಪ್ರೇರಣೆ ನೀಡುವಂಥದ್ದಾಗಿದ್ದೆ. 50 ವರ್ಷಗಳಿಂದ ಯಡಿಯೂರಪ್ಪನವರು ಜನಸೇವೆಯಲ್ಲಿದ್ದಾರೆ. ಕರ್ನಾಟಕದ ಅಭಿವೃದ್ಧಿ ರಥದಲ್ಲಿ ಅಭಿವೃದ್ಧಿ ಪಥವಿದೆ. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯ ರಥ ಸಾಗುತ್ತಿದೆ. ವಿಮಾನಯಾನ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ತಿಳಿಸಿದರು.