ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್ ವ್ಯಂಗ್ಯಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ. ಬಿ.ಎಸ್. ಯಡಿಯೂರಪ್ಪ ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಹೇಳಿದೆ.