ಮೂಡುಬಿದಿರೆ: ಯಕ್ಷರಂಗದ ಭಾಗವತಿಕೆಯ ಭೀಷ್ಮ ಎಂದೇ ಖ್ಯಾತರಾಗಿರುವ ಹಿರಿಯ ಭಾಗವತ ಬಲಿಪ ನಾರಾಯಣ ಭಾಗವತರು(86) ಗುರುವಾರ ಸಾಯಂಕಾಲ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿರುವ ನೂಯಿ ಸ್ವಗೃಹದಲ್ಲಿ ನಿಧನರಾದರು.
ಕಳೆದ ಕೆಲವು ದಶಕಗಳಿಂದ ಯಕ್ಷಗಾನ ಭಾಗವತಿಕೆಯಲ್ಲಿ ತಮ್ಮ ಕಂಚಿನ ಕಂಠದ ಮೂಲಕ ಸುಪ್ರಸಿದ್ಧರಾಗಿದ್ದ ಅವರು ಸಾವಿರಾರು ಅಭಿಮಾನಿಗಳನ್ನು ಹೊಂದಿದ್ದರು.ವರ್ಷ ಪ್ರಾಯದ ಭಾಗವತರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ.ನಾಲ್ವರು ಪುತ್ರರ ಪೈಕಿ ಕಳೆದ ವರ್ಷ ಓರ್ವ ಪುತ್ರ ಪ್ರಸಾದ್ ಭಾಗವತರು ನಿಧನರಾಗಿದ್ದರು. ಮೂವರು ಪುತ್ರರು, ಕುಟುಂಬ ವರ್ಗ ಹಾಗೂ ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.
ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡಿನ ಪಡ್ರೆ ಗ್ರಾಮದವರು. ತೆಂಕುತಿಟ್ಟಿನ ಪ್ರಸಿದ್ಧ ಮತ್ತು ಹಿರಿಯ ಭಾಗವತರು. ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷ ಭಾಗವತರಾಗಿ ಸೇವೆ ಸಲ್ಲಿಸಿದ್ದಾರೆ.ಯಕ್ಷಗಾನದ ಹಲವಾರು ಪ್ರಸಂಗಗಳನ್ನು ರಚಿಸಿದ್ದಾರೆ. ಯಕ್ಷಗಾನ ಹಾಡುಗಳ ಅನೇಕ ಕೃತಿಗಳನ್ನೂ ರಚಿಸಿದ್ದಾರೆ.