ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಕಾರಣ ಎನ್ ಆರ್ ಸಂತೋಷ್ ಅವರು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಮೊದಲು ಅರಸೀಕೆರೆ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅಶೋಕ್ ಅವರ ಮನವೊಲಿಸಿ ಸಂತೋಷ್ಗೆ ಟಿಕೆಟ್ ನೀಡಿದ್ದಾರೆ.