ಮೈಸೂರು: ಚೆನ್ನೈ- ಬೆಂಗಳೂರು- ಮೈಸೂರು ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿದೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರ ನಡೆಯಿತು. 10:30ಕ್ಕೆ ಬೆಂಗಳೂರಿನಿಂದ ಹೊರಟು 12:13ಕ್ಕೆ ಮೈಸೂರು ತಲುಪಿದೆ.