ಯುಕೆಜಿ ಓದುತ್ತಿದ್ದ ವಿದ್ಯಾರ್ಥಿನಿ ಪುಟಾಣಿ ಬಿ ನಂದಿನಿಯನ್ನು ಸಂಸ್ಥೆ ಫೇಲ್ ಮಾಡಿದ್ದು, ಇದೀಗ ಶಾಲೆಯ ಆಡಳಿತ ಮಂಡಳಿ ಕ್ರಮಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದು, ಮಗುವನ್ನು ಏನು ಮಾಡಲು ಹೊರಟಿದೆ ಎಂದು ಪ್ರಶ್ನಿಸಿದ್ದಾರೆ. ನನ್ನ ಗಮನಕ್ಕೆ ಈ “ಮಹಾಕೃತ್ಯ” ಬಂದ ಕೂಡಲೇ ಶಿಕ್ಷಣ ಇಲಾಖೆಯ ಆ ತಾಲೂಕಿನ ಪ್ರಮುಖರಿಗೆ ತಲುಪಿಸಿ ಈ ಶಾಲೆಯ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಮನವಿ ಮಾಡಿದ್ದೇನೆ ಎಂದಿದ್ದಾರೆ