ಯುವಜನೋತ್ಸವ ಅರ್ಥಪೂರ್ಣವಾಗಿ ಜರುಗಿದೆ ಸಿಎಂ ಬೊಮ್ಮಾಯಿ

Advertisement

ಹುಬ್ಬಳ್ಳಿ : ಏಳು ದಿನಗಳ ಕಾಲ ಅದ್ಭುತವಾದ ಯುವಜನೋತ್ಸವ , ಅರ್ಥಪೂರ್ಣವಾಗಿ ಜರುಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯದ ಯುವಕರಿಗೆ ಸ್ಪೂರ್ತಿ
ಇಂದು ಸಮಾರೋಪ ಸಮಾರಂಭ ಜರುಗುತ್ತಿದೆ. ವಿವಿಧ ರಾಜ್ಯಗಳ ಕ್ರೀಡಾ ಪಟುಗಳು ಆಗಮಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ ಅರ್ಥಪೂರ್ಣವಾಗಿ ನಡೆಸಿಕೊಟ್ಟಿದ್ದಾರೆ. ಈ ಭಾಗದಲ್ಲಿ ಈ ರೀತಿಯ ಕಾರ್ಯಕ್ರಮಗಳಿಂದ ಯುವಕರಿಗೆ ಸಾಧನೆ ಮಾಡಲು ಸ್ಪೂರ್ತಿ ದೊರೆಯಲಿದೆ. ನಮ್ಮ ರಾಜ್ಯದ ಯುವ ನೀತಿಯಲ್ಲಿ ಶಿಕ್ಷಣ, ಉದ್ಯೋಗ,ಕ್ರೀಡೆ ಹಾಗೂ ಸಂಸ್ಕ್ರುತಿಗೆ ಮಹತ್ವ ನೀಡಲಾಗಿದೆ. ಯುವಕರಿಗೆ ಎಲ್ಲಾ ರಂಗಗಳಲ್ಲಿ ಅವಕಾಶ ನೀಡಲಾಗಿದೆ. ಈ ವರ್ಷ ಗ್ರಾಮೀಣ ಕ್ರೀಡೆಗಳನ್ನು ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಿದ್ದು, ಕಬ್ಬಡ್ಡಿ, ಕುಸ್ತಿ, ಖೋ ಖೋ ಮುಂತಾದ ಗ್ರಾಮೀಣ ಸೊಗಡಿರುವ ಕ್ರೀಡೆಗಳನ್ನು ಪ್ರಥಮ ಬಾರಿಗೆ ರಾಜ್ಯದಲ್ಲಿ ಏರ್ಪಡಿಸಿ ಹೊಸ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಅವಕಾಶ ನೀಡಲಾಗುತ್ತಿದೆ ಎಂದರು.
ಗಡ್ಕರಿಯವರಿಗೆ ಬೆದರಿಕೆ: ಸಂಪೂರ್ಣ ತನಿಖೆ
ಹಿಂಡಲಗ ಜೈಲಿನಿಂದ ಕೇಂದ್ರ ಸಚಿವರಿಗೆ ಬೆದರಿಕೆ ಕರೆ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ತಪ್ಪಿಸಿಕೊಂಡಿರುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತಿದೆ. ಅದಕ್ಕಿಂತ ಮುಖ್ಯ ವಾಗಿ ಅವರ ಹಿನ್ನೆಲೆಯನ್ನು ಪರಿಶೀಲಿಸಲಾಗುತ್ತದೆ. ಎಂದರು.