ಯುವಜನ ಮಹೋತ್ಸವಕ್ಕೆ ನರೆಂದ್ರ ಮೋದಿ ಆಗಮನ

JOSHI
Advertisement

ಹುಬ್ಬಳ್ಳಿ: ಪ್ರಧಾನಮಂತ್ರಿ ನರೆಂದ್ರ ಮೋದಿಯವರು ಯುವಜನ ಮಹೋತ್ಸವ ಉದ್ಘಾಟಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು ಜನವರಿ 12 ರಿಂದ 16ರ ವರೆಗೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಅಂಗವಾಗಿ ನಡೆಯಲಿರುವ ಯುವಜನ ಮಹೋತ್ಸವವನ್ನು ರಾಜ್ಯದಲ್ಲಿ ಉದ್ಘಾಟಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆಗಮಿಸಲಿದ್ದಾರೆ. ಈ ಬಾರಿಯ 26ನೇ ರಾಷ್ಟ್ರೀಯ ಯುವ ಜನೋತ್ಸವ ನಮ್ಮ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ನಡೆಯಲಿರುವುದು ಹೆಮ್ಮೆಯ ವಿಷಯಯವಾಗಿದೆ ಎಂದರು. ಸ್ವಾಮಿ ವಿವೇಕಾನಂದರ 160ನೇ ಜನ್ಮ ದಿನಾಚರಣೆ ಪ್ರಯುಕ್ತ ಜನವರಿ 12ಕ್ಕೆ ಉದ್ಘಾಟನೆಗೊಳ್ಳಲಿದ್ದು, 16ರ ವರೆಗೆ ಈ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದೆ. ಉತ್ತರ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಈ ರಾಷ್ಟ್ರ‍ೀಯ ಯುವ ಜನೋತ್ಸವಕ್ಕೆ ಅವಳಿ ನಗರಕ್ಕೆ ದೇಶದ ಮೂಲೆ ಮೂಲೆಯಿಂದ ಆಗಮಿಸುವ ಯುವಕರನ್ನು ಸ್ವಾಗತಿಸಲು ಸನ್ನದ್ಧವಾಗಿದೆ ಎಂದರು.