ರಾಜ್ಯದಲ್ಲಿ ಆಡಳಿತ ಸರಿಯಿಲ್ಲ, ಅಮಿತ್ ಶಾ ಅವರಿಗೂ ಮನವರಿಕೆ ಆಗಿದೆ: ಡಿಕೆಶಿ

DKS
Advertisement

ಬೆಂಗಳೂರು: ಅಮಿತ್ ಶಾ ಅವರು ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಿ, ರಾಜ್ಯದಲ್ಲಿ ಆಡಳಿತ ಸರಿಯಿಲ್ಲ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ವಹಿಸಿಕೊಳ್ಳಲು ಯಾರೂ ಸಿದ್ಧರಿಲ್ಲ, ಈಗಿರುವ ಮುಖಂಡರ ನಾಯಕತ್ವದಲ್ಲಿ ಮುಂದಿನ ಚುನಾವಣೆ ಗೆಲ್ಲಲು ಆಗುವುದಿಲ್ಲ ಎಂಬುದನ್ನು ಒಪ್ಪಿಕೊಂಡು, ಪ್ರಧಾನ ಮಂತ್ರಿಗಳ ಮುಖಂಡತ್ವದಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಿಸುವುದಾಗಿ ಸತ್ಯ ನುಡಿದಿದ್ದಾರೆ. ಇದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಪಕ್ಷವು ಮಲ್ಲಿಕಾರ್ಜುನಖರ್ಗೆ, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಪರಮೇಶ್ವರ್, ಹೆಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಹರಿಪ್ರಸಾದ್ ಸೇರಿದಂತೆ ಹಲವು ನಾಯಕರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ. ನಮ್ಮ ಸಾಮೂಹಿಕ ನಾಯಕತ್ವವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದು ಪ್ರಧಾನಮಂತ್ರಿಗಳ ಹೆಸರನ್ನು ಮುಂಚೂಣಿಗೆ ಇಟ್ಟಿದ್ದಾರೆ ಎಂದಿದ್ದಾರೆ. ಕಳೆದ ಮೂರು ವರ್ಷಗಳಿಂದ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಬಿಜೆಪಿ ಸರ್ಕಾರದ ಆಡಳಿತ ಸಂಪೂರ್ಣ ವಿಫಲ ಆಗಿದೆ ಎಂಬುದಕ್ಕೆ ಅವರ ನುಡಿ ಮುತ್ತುಗಳೇ ಸಾಕ್ಷಿ ಎಂದು ತಿಳಿಸಿದ್ದಾರೆ.