ಬೆಂಗಳೂರು: ಕರ್ನಾಟಕದಲ್ಲಿ 15,000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವಯುತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಉದ್ಘಾಟಿಸಿದ “ಇಂಡಿಯನ್ ಎನರ್ಜಿ ವೀಕ್-2023” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಶೇ. 50ರಷ್ಟು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ನವೀಕರಿಸಬಹುದಾದ ಇಂಧನವನ್ನು ಸಂಗ್ರಹಿಸಲು ಪಂಪ್ ಸ್ಟೋರೇಜ್ ಸೇರಿದಂತೆ ವಿವಿಧ ರೀತಿಯ ಸಂಗ್ರಹಣೆಯತ್ತ ರಾಜ್ಯ ಗಮನ ಹರಿಸುತ್ತಿದೆ ಎಂದರು.