ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ

Advertisement

ತೆಲಂಗಾಣ: ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ರಾಜ್ಯದ ಜನತೆಯನ್ನು ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತೆಲಂಗಾಣ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿತು. ನಾವು ಅಧಿಕಾರ ಸ್ವೀಕರಿಸಿದ ಮೇ 20ರ ದಿನದಂದೇ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿ, ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು ಎಂದರು.