ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ನೇಮಕ ಮಾಡಿದೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವಂತೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜಗತ್ ಪ್ರಕಾಶ್ ನಡ್ಡಾ ಅವರು ಧರ್ಮೇಂದ್ರ ಪ್ರಧಾನ್, ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ, ಭಾರತ ಸರ್ಕಾರದ ಉಸ್ತುವಾರಿ ಮತ್ತು ಕೆ. ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದಾರೆ. ಕರ್ನಾಟಕ ರಾಜ್ಯದ ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಹ-ಪ್ರಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಲ್ಲಿ ವಿಶೇಷ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸೇರಿ ವಿವಿಧ ರಾಜ್ಯಗಳ ಬಿಜೆಪಿ ನಾಯಕರು ಸಭೆಗೆ ಆಗಮಿಸಿದ್ದಾರೆ. ಈ ವೇಳೆ ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಕ್ಕೆ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ನೇಮಕವಾಗಿದ್ದಾರೆ.