ರಾಜ್ಯ ಬಜೆಟ್: ಪ್ರವಾಸೋದ್ಯಮಕ್ಕೆ ಭರ್ಜರಿ ಕೊಡುಗೆ

CM
Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಪ್ರವಾಸೋದ್ಯಮಕ್ಕೆ ಭರ್ಜರಿ ಕೊಡುಗೆ ನೀಡಿದ್ದಾರೆ. ಪ್ರವಾಸಿ ಗೈಡ್‌ಗಳ ಮಾಸಿಕ ಪ್ರೋತ್ಸಾಹ ಧನ 2ರಿಂದ 5 ಸಾವಿರಕ್ಕೆ ಏರಿಕೆ, ನಂದಿ ಗಿರಿಧಾಮ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ, ನಂದಿಬೆಟ್ಟಕ್ಕೆ ಖಾಸಗಿ-ಸರ್ಕಾರಿ ಸಹಭಾಗಿತ್ವದಲ್ಲಿ ರೋಪ್‌ ವೇ ನಿರ್ಮಾಣ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ರೂ. ಕೋಟಿ ಬಿಡುಗಡೆ ಮಾಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮ್ಯೂಸಿಯಂ, ಕಲಾ ಗ್ಯಾಲರಿ ನಿರ್ಮಾಣ, ಹೊನ್ನಾವರದಲ್ಲಿ ಚೆನ್ನಭೈರಾದೇವಿ ಸ್ಮಾರಕ ಪಾರ್ಕ್‌ ನಿರ್ಮಾಣ, ಮೈಸೂರಿನಲ್ಲಿರುವ ಚಾಮುಂಡಿ ವಿಹಾರದ ಕ್ರೀಡಾಂಗಣದಲ್ಲಿ 2.5 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಜ್ಯ ವಸ್ತು ಸಂಗ್ರಹಾಲಯ, ಕಲಾ ಗ್ಯಾಲರಿ ನಿರ್ಮಾಣಕ್ಕೆ 10 ಕೋಟಿ ರೂ. ಘೋಷಿಸಿದ್ದಾರೆ.