ರಾಜ್ಯ ರಾಜಕಾರಣಕ್ಕೆ ಸುಮಲತಾ?

ಸುಮಲತಾ
Advertisement

ಮಂಡ್ಯ: ಸಂಸದೆ ಸುಮಲತಾ ಅಂಬರೀಷ್ ಬೆಂಬಲಿಗರು ಇಂದು ಮಂಡ್ಯದಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ರಾಜ್ಯ ರಾಜಕಾರಣಕ್ಕೆ ಸುಮಲತಾ ಬರಲೇಬೇಕೆಂದು ಒತ್ತಾಯ ಮಾಡಿದ್ದಾರೆ.
ಏಳು ವಿಧಾನಸಭಾ ಕ್ಷೇತ್ರದಿಂದ ಸಭೆಗೆ ಆಗಮಿಸಿದ್ದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದು, ಕೆಲವರು ಕಾಂಗ್ರೆಸ್‌ ಸೇರಬೇಕೆಂದು ಹೇಳಿದರೆ, ಇನ್ನೂ ಕೆಲವರು ಬಿಜೆಪಿ ಸೇರಬೇಕೆಂದು ಒತ್ತಡ ಹೇರಿದ್ದಾರೆ.
ಅಲ್ಲದೇ ಬಹುತೇಕ ಬೆಂಬಲಿಗರು ರಾಜ್ಯ ರಾಜಕೀಯಕ್ಕೆ ಬರಲೇಬೇಕೆಂದು ಒತ್ತಾಯ ಮಾಡಿದ್ದು, ಮದ್ದೂರು ಹಾಗೂ ಮಂಡ್ಯ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸುಮಲತಾ ವಿರುದ್ಧ ಶಾಸಕ ಪುಟ್ಟರಾಜು ಹೇಳಿಕೆ ವಿಚಾರವಾಗಿ ಮುಂದಿನ ದಿನಗಳಲ್ಲಿ ಶಾಸಕರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.