ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಮತ್ತೊಂದು ಹೊಸ ತಿರುವು ಪಡೆದಿದೆ.
ಸರ್ಕಾರಕ್ಕೆ ಮುಜುಗರ ತಂದಿದ್ದ ಇಬ್ಬರು ಅಧಿಕಾರಿಗಳನ್ನು ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಅವರ ಪತಿ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಜಾಗಕ್ಕೆ ಹೆಚ್. ಬಸವರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ. ಕರಕುಶಲ ನಿಗಮ ಎಂಡಿ ಆಗಿದ್ದ ಡಿ.ರೂಪಾ ಮೌದ್ಗಿಲ್ ಅವರ ಜಾಗಕ್ಕೆ ಡಿ. ಭಾರತಿ ಅವರನ್ನು ನೇಮಕ ಮಾಡಿದೆ. ಸರ್ವೆ ಮತ್ತು ಭೂ ದಾಖಲೆಗಳ ಆಯುಕ್ತರಾಗಿದ್ದ ಮುನೀಶ್ ಮೌದ್ಗಿಲ್ ಅವರನ್ನು ಆಡಳಿತ ಸುಧಾರಣ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.