ಲೋಕಸಭೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪ್ರತಿಧ್ವನಿ

ಸುಪ್ರಿಯಾ ಸುಳೆ
Advertisement

ನವದೆಹಲಿ: ಇಂದು ಲೋಕಸಭೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಪ್ರತಿಧ್ವನಿಸಿದೆ. ಈ ಸಂಬಂಧ ಗೃಹ ಸಚಿವಾಲಯ ಮಧ್ಯಪ್ರವೇಶಿಸುವಂತೆ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಕೋರಿದ್ದಾರೆ.
ಶೂನ್ಯವೇಳೆಯಲ್ಲಿ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಮಹಾರಾಷ್ಟ್ರದ ಜನರು ಪ್ರತಿದಿನ ಹೊಡೆತ ಅನುಭವಿಸುತ್ತಿದ್ದಾರೆ ಎಂದು ಹೇಳಿದರು.
ಕಳೆದ 10 ದಿನಗಳಲ್ಲಿ ಮಹಾರಾಷ್ಟ್ರವನ್ನು ಒಡೆಯಲು ಸಂಚು ರೂಪಿಸಲಾಗುತ್ತಿದೆ. ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಅವರು ಒತ್ತಾಯಿಸಿದರು.
ಕರ್ನಾಟಕದ ಬಿಜೆಪಿ ಸಂಸದರು ಸುಪ್ರಿಯಾ ಸುಳೆ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ, ಈ ವಿಚಾರವು ನ್ಯಾಯಾಲಯದಲ್ಲಿದೆ ಎಂದು ಪ್ರತ್ಯುತ್ತರ ನೀಡಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮಾತನಾಡಿ, ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಎರಡು ರಾಜ್ಯಗಳ ನಡುವಿನ ವಿಚಾರವಾಗಿದೆ ಎಂದರು.
ಇದನ್ನು ವಿರೋಧಿಸಿ ಎನ್‌ಸಿಪಿ ಸದಸ್ಯರು ಸದನದಿಂದ ಹೊರನಡೆದರು.