ಬೆಳಗಾವಿ: ರಾಜ್ಯದಲ್ಲಿ ನಡೆಯುತ್ತಿರುವ ಸಂಕಲ್ಪ ಯಾತ್ರೆ ನಡುವೆ ಶೀಘ್ರದಲ್ಲೇ ದೆಹಲಿಗೆ ಹೋಗಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿ ಶೀಘ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದ ಅವರು, ವಿಸ್ತರಣೆಯಲ್ಲಿ ಬೆಳಗಾವಿಗೆ ಸಿಹಿ ನೀಡುವ ಬಗ್ಗೆ ಕಾಯ್ದು ನೋಡಿ ಎಂದು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.