ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಗೌಡಹಳ್ಳಿ ಗ್ರಾಮದ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಚಿರತೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಂದುವರೆ ವರ್ಷದ ಹೆಣ್ಣು ಚಿರತೆ ತಲೆಗೆ ಪೆಟ್ಟು ಬಿದ್ದು ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.