95ನೇ ಆಸ್ಕರ್ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ ಸಿನೆಮಾ ನಾಮನಿರ್ದೇಶನಗೊಂಡಿದೆ.
ದಕ್ಷಿಣ ಭಾರತೀಯ ಚಿತ್ರಗಳಲ್ಲಿ ನಟನಾ ವಿಭಾಗದಲ್ಲಿ ಈ ಸಿನಿಮಾ ಆಯ್ಕೆಯಾಗಿದ್ದು, ಕಾಂತಾರ ಮತ್ತು ವಿಕ್ರಾಂತ್ ರೋಣ ಕನ್ನಡದ ಎರಡು ಚಿತ್ರಗಳು ಈ ಬಾರಿ ಆಸ್ಕರ್ ಅಂಗಳದಲ್ಲಿವೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರೂಪ್ ಭಂಡಾರಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ. ಜಾಕ್ ಮಂಜು ಇದಕ್ಕೆ ಬಂಡವಾಳ ಹಾಕಿದ್ದರು. 2016ರಲ್ಲಿ ಅನೂಪ್ ಭಂಡಾರಿ ನಿರ್ದೇಶನದ ರಂಗಿತರಂಗ ಚಿತ್ರ ಕೂಡ ಆಸ್ಕರ್ ಕದ ತಟ್ಟಿ ಬಂದಿತ್ತು.