ವಿಜಯಪುರದಲ್ಲಿ ಬಿಜೆಪಿ ವಿಜಯೋತ್ಸವ

BJP
Advertisement

ವಿಜಯಪುರ : ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೇತೃತ್ವದಲ್ಲಿ ಭವ್ಯ ವಿಜಯೋತ್ಸವ ಆಚರಿಸಿತು.
ನಗರದ ಅಥಣಿ ರಸ್ತೆಯಲ್ಲಿರುವ ಬಾಬು ಜಗಜೀವನ್ ರಾಮ್ ವೃತ್ತದಿಂದ ಛತ್ರಪತಿ ಶಿವಾಜಿ ಮಹಾರಾಜರ ವೃತ್ತದ ಮಾರ್ಗವಾಗಿ ಮಹಾತ್ಮಾ ಗಾಂಧಿವೃತ್ತ ಮೂಲಕ ಶ್ರೀ ಸಿದ್ದೇಶ್ವರ ದೇವಸ್ಥಾನದ ವರೆಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿಯ ನೂತನ ಸದಸ್ಯರನ್ನು ಭವ್ಯ ಮೆರವಣಿಗೆ ನಡೆಸಿದರು.
ಬಿಜೆಪಿ ವಿಜಯೋತ್ಸವ ಮೆರವಣಿಗೆಯಲ್ಲಿ ಜನಸಾಗರವೇ ಹರಿದು ಬಂದಿತ್ತು. ಡೊಳ್ಳು ಕುಣಿತ, ಗೊಂಬೆ ಕುಣಿತ ಸೇರಿದಂತೆ ಅನೇಕ ಸಾಂಸ್ಕೃತಿಕ ಕಲಾ ತಂಡಗಳು ಕುಣಿದು ತಮ್ಮ ಪ್ರದರ್ಶನ ನೀಡಿದವು. ಡಿಜೆ ಸೌಂಡ್‌ಗೆ ಬಿಜೆಪಿ ಕಾರ್ಯಕರ್ತರು ಕುಣಿದು ಸಂಭ್ರಮಿಸಿದರು. ವಿಜಯೋತ್ಸವ ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಸೂಕ್ತ ಬಂದೋಬಸ್ತ್ ಮಾಡಿದ್ದರು.
ಮೆರವಣಿಗೆಯಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಕುಡಚಿ ಶಾಸಕ ಪಿ. ರಾಜೀವ, ಅಭಯ್ ಪಾಟೀಲ, ನಿಂಬೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದ್ರಶೇಖರ ಕವಟಗಿ, ಮಲ್ಲಿಕಾರ್ಜುನ ಜೋಗುರ, ಬಸವರಾಜ್ ಬಿರಾದಾರ ಸೇರೆದಂತೆ ಅನೇಕ ಬಿಜೆಪಿ ಮುಖಂಡರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.