ಬೆಂಗಳೂರು: ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಧಾರವಾಡಕ್ಕೆ ಜಿಲ್ಲೆಗೆ ಪ್ರಚಾರಕ್ಕೆ ಹೋಗುವಂತಿಲ್ಲ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಲ್ಲಿ ಹೇಳಿದೆ.
ಪ್ರಚಾರ ಕಾರ್ಯಕ್ಕಾಗಿ ಧಾರವಾಡಕ್ಕೆ ಹೋಗಲು ಅನುಮತಿ ನೀಡುವಂತೆ ಕೋರಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಚುನಾವಣೆಗೆ ಸ್ಪರ್ಧೆ ಮಾಡಬಹುದು. ಆದರೆ ನಗರ ಪ್ರವೇಶ ಮಾಡುವಂತಿಲ್ಲ ಎಂದು ಹೇಳಿದೆ.
ಧಾರವಾಡದಲ್ಲಿ ಯೋಗೀಶ್ ಗೌಡ ಹತ್ಯೆ ಪ್ರಕರಣದ 90 ಸಾಕ್ಷಿಗಳಿದ್ದಾರೆ. ವಿನಯ ಕುಲಕರ್ಣಿಗೆ ಧಾರವಾಡ ಪ್ರವೇಶಕ್ಕೆ ಅನುಮತಿ ನೀಡಿದರೆ ಪ್ರಕರಣಕ್ಕೆ ಸಮಸ್ಯೆಯಾಗಬಹುದು. ಸೂಚಕರ ಮೂಲಕವೇ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಅವಕಾಶವಿದೆ ಎಂದು ಕೋರ್ಟ್ ಮುಂದೆ ಸಿಬಿಐ ಪರ ವಕೀಲರು ವಾದ ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಬಿ. ಜಯಂತ ಕುಮಾರ್, ವಿನಯ ಕುಲಕರ್ಣಿ ಮನವಿಯನ್ನು ತಿರಸ್ಕರಿಸಿ ಆದೇಶ ಹೊರಡಿಸಿದರು.
ಏ. 15ರಂದು ವಿನಯ ಕುಲಕರ್ಣಿ ಅವರ ಅರ್ಜಿ ವಿಚಾರಣೆಯನ್ನು ಪೂರ್ಣ ಮಾಡಿದ್ದ ಕೋರ್ಟ್ ಏ. 18ಕ್ಕೆ ತೀರ್ಪು ಕಾಯ್ದಿರಿಸಿತ್ತು.