ಹಾವೇರಿ: ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರಿನ ಬೀರಲಿಂಗೇಶ್ವರ ನಗರದ ಮನೆ ಮೇಲೆ ಮಂಗಳವಾರ ತಡರಾತ್ರಿ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸುಮಾರು 8 ಕೊಟಿ ರೂಪಾಯಿ ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ. ಪ್ರಮುಖವಾಗಿ ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟ ಹಾಗೂ ಶಾಲೆ, ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್ ಸಿಕ್ಕಿವೆ ಎಂದು ತಿಳಿದುಬಂದಿದೆ.
6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್‌ಗಳು ಸೇರಿದಂತೆ ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ. ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಈ ಎಲ್ಲಾ ವಸ್ತುಗಳನ್ನು ಅಧಿಕಾರಿಗಳು ಪೊಲೀಸರ ವಶಕ್ಕೆ ನೀಡಿದ್ದಾರೆ.