ಹುಬ್ಬಳ್ಳಿ: ಸಾರಿಗೆ ಪ್ರಾದೇಶಿಕ ಕಾರ್ಯಾಗಾರದಲ್ಲಿ ರವಿವಾರವಷ್ಟೆ ಬೆಂಕಿ ಅವಘಡದ ಪ್ರಕರಣ ಮಾಸುವ ಮುನ್ನವೇ, ಸೋಮವಾರ ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಹುಬ್ಬಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು, ಬೆಂಕಿಯ ಜ್ವಾಲೆ ಮುಗಿಲು ಮುಟ್ಟಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.