ವಿಮಾನ ಹಾರಾಟ ಪುನರಾರಂಭಿಸಿ

Advertisement

ಬೆಳಗಾವಿ: ಸ್ಥಗಿತಗೊಂಡಿರುವ ಬೆಳಗಾವಿಯಿಂದ ದೆಹಲಿ, ಮುಂಬೈ, ಪುಣೆ ಮುಂತಾದೆಡೆಗೆ ವಿಮಾನ ಹಾರಾಟವನ್ನು ಪುನರಾರಂಭಿಸಬೇಕು ಎಂದು ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ಲಾಭದಾಯಕವಾಗಿ ನಡೆಯುತ್ತಿದ್ದರೂ ವಿಮಾನಯಾನ ಸಂಸ್ಥೆಗಳು ಹಾರಾಟ ನಿಲ್ಲಿಸಿರುವುದು ಸಮಂಜಸವಲ್ಲ. ಪ್ರಯಾಣಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಹಿಂದಿನ ಎಲ್ಲಾ ವಿಮಾನಗಳನ್ನು ಪುನರಾರಂಭಿಸಲು ಕ್ರಮ ಕೈಗೊಳ್ಳಬೇಕು,’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ .
ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿ ಎಂದು ಪರಿಗಣಿಸಲಾಗಿದೆ ಪ್ರತಿ ವರ್ಷವೂ ಚಳಿಗಾಲದ ಅಧಿವೇಶನ ನಡೆಯುತ್ತದೆ. ಆರ್ಥಿಕತೆ, ಆರೋಗ್ಯ ವಿಜ್ಞಾನ, ಉದ್ಯಮ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಪ್ರಗತಿ ಸಾಧಿಸಲಾಗಿದೆ. ಇಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು KLE ವಿಶ್ವವಿದ್ಯಾಲಯಗಳಿವೆ. ನಗರವು ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿದೆ. ವಿದೇಶಿ ಪ್ರವಾಸಿಗರ ಆಗಮನ ಮತ್ತು ನಿರ್ಗಮನವೂ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಶೈಕ್ಷಣಿಕ ಮತ್ತು ಆರೋಗ್ಯ ಸಂಬಂಧಿತ ಉದ್ದೇಶಗಳಿಗಾಗಿ ಬರುತ್ತಾರೆ. ಆದರೆ, ವಿಮಾನ ಹಾರಾಟ ರದ್ದು ಪಡಿಸಿದ್ದರಿಂದ ಅವರೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ.