ಬಾಂಗ್ಲಾದೇಶದ ಚಟ್ಟೋಗ್ರಾಮ್‌ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.
ಟಿ-20 ಕ್ರಿಕೆಟ್ ನಲ್ಲಿ ಭರ್ಜರಿ ಫಾರ್ಮ್ ಗೆ ಮರಳಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಲ್ಲೂ ಶತಕ ಸಿಡಿಸುವ ಮೂಲಕ ಶತಕದ ಬರ ನೀಗಿಸಿಕೊಂಡಿದ್ದಾರೆ. ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಶತಕದ ದಾಖಲೆಯಲ್ಲಿ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಢಾಕಾದಲ್ಲಿ ಶನಿವಾರ ನಡೆದ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ 2019ರ ನಂತರ ಏಕದಿನ ಕ್ರಿಕೆಟ್ ನಲ್ಲಿ ಮೊದಲ ಶತಕ ದಾಖಲಿಸಿದರು. ಇತ್ತೀಚೆಗಷ್ಟೇ ಮುಕ್ತಾಯಗೊಂಡ ಟಿ-20 ವಿಶ್ವಕಪ್ ನಲ್ಲಿ ಶತಕ ಸಿಡಿಸಿದ್ದ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್ ನಲ್ಲೂ ಶತಕದ ಬರ ನೀಗಿಸಿಕೊಂಡಿದ್ದಾರೆ.
ಇದು ವಿರಾಟ್ ಕೊಹ್ಲಿಗೆ 72ನೇ ಅಂತಾರಾಷ್ಟ್ರೀಯ ಶತಕವಾಗಿದ್ದು, 44ನೇ ಏಕದಿನ ಶತಕವಾಗಿದೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 49 ಶತಕ ಸಿಡಿಸಿ ಮೊದಲ ಸ್ಥಾನದಲ್ಲಿದ್ದರು, ಈ ದಾಖಲೆ ಮುರಿಯಲು ಕೇವಲ 5 ಶತಕ ಕೊಹ್ಲಿಗೆ ಬೇಕಾಗಿದೆ. ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ಅತೀ ಹೆಚ್ಚು ಶತಕ ಸಿಡಿಸಿದವರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. 100 ಶತಕ ಸಿಡಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.
ವಿರಾಟ್ ಕೊಹ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ್ದು, ಅಂತಿಮವಾಗಿ 91 ಎಸೆತಗಳಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 113 ರನ್‌ಗಳಿಸಿದ್ದಾಗ ಶಕೀಬ್ ಅಲ್ ಹಸನ್‌ಗೆ ವಿಕೆಟ್ ಒಪ್ಪಿಸಿದರು. ಇದಕ್ಕೂ ಮುನ್ನ ಕೊಹ್ಲಿ ಮತ್ತು ಇಶಾನ್ ಕಿಶನ್ ಎರಡನೇ ವಿಕೆಟ್‌ಗೆ ದಾಖಲೆಯ 290 ರನ್ ಗಳ ಜೊತೆಯಾಟ ನಿಭಾಯಿಸಿದರು.