ವಿಷಪೂರಿತ ಆಹಾರ ಸೇವನೆ: 90 ವಿದ್ಯಾರ್ಥಿಗಳು ಅಸ್ವಸ್ಥ

Advertisement

ಮಂಗಳೂರು: ನಗರದ ಖಾಸಗಿ ಆಸ್ಪತ್ರೆ ಹಾಸ್ಟೆಲ್ ಒಂದರಲ್ಲಿ ವಿಷಾಹಾರ ಸೇವನೆಯಿಂದ 90ರಷ್ಟು ವಿದ್ಯಾರ್ಥಿಗಳು ಆಸ್ಪತ್ರೆ ಸೇರಿದ ಘಟನೆ ನಡೆದಿದೆ.
ಅಲ್ಲಿ ಕಾರ್ಯಾಚರಿಸುತ್ತಿರುವ ಖಾಸಗಿ ನರ್ಸಿಂಗ್ ಕಾಲೇಜಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.
ಹಾಸ್ಟೆಲ್ ನಲ್ಲಿ ಮಾಡಿದ ಕೋಳಿ ಪದಾರ್ಥದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ.