ಧಾರವಾಡ: ಅಕ್ರಮವಾಗಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ ಘಟನೆ ಉಪನಗರ ಠಾಣಾ ವ್ಯಾಪ್ತಿಯ ಸಂತೋಷ ನಗರದಲ್ಲಿ ಬೆಳಕಿಗೆ ಬಂದಿದೆ.
ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಸಂತೋಷ ನಗರದ 4ನೇ ಕ್ರಾಸ್‌ನ ಘಾಟಗೆ ಎಂಬುವವರ ಮನೆಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂದು ಉಪನಗರ ಠಾಣೆಗೆ ಮಾಹಿತಿ ಬಂದಿದೆ.
ತಕ್ಷಣ ಎಚ್ಚೆತ್ತ ಪೊಲೀಸರು ಮನೆಯ ಮೇಲೆ ದಾಳಿ ಮಾಡಿದ್ದು, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಆದರೆ, ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವ್ಯಕ್ತಿಗಳು ಯಾರು ಎನ್ನುವುದನ್ನು ಮಾತ್ರ ದೂರಿನಲ್ಲಿ ತೋರಿಸಿಲ್ಲ.
ಪಾಲಿಕೆ ಸದಸ್ಯ ಭಾಗಿ…?
ಹೈಟೆಕ್ ವೇಶ್ಯಾವಾಟಿಕೆ ದಂಧೆಯಲ್ಲಿ ಯುವ ಪಾಲಿಕೆ ಸದಸ್ಯನ ಕೈವಾಡವಿದೆ ಎಂಬ ಮಾತುಗಳು ಕೇಳಿಬಂದಿದ್ದು, ಆತನನ್ನು ಪ್ರಕರಣದಿಂದ ದೂರ ಉಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಮೇಲೆ ಒತ್ತಡ ತರಲಾಗುತ್ತಿದೆ ಎಂಬ ಗುಸುಗುಸು ಮಾತುಗಳು ಕೇಳಿಬರುತ್ತಿವೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದನ್ನು ಹುಬ್ಬಳ್ಳಿ ಮಹಿಳಾ ಠಾಣೆಗೆ ವರ್ಗಾವಣೆ ಮಾಡಲಾಗಿದೆ.