ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು

Advertisement

ಧಾರವಾಡ: ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಸೇವೆ ಆರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪ್ರಯಾಣಕ್ಕೆ ಸಹಕಾರಿಯಾಗುವ ಸಲುವಾಗಿ ವಿಶೇಷ ರೈಲು ಸೇವೆ ಆರಂಭಿಸುವಂತೆ ನಾನು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಪ್ರಸ್ತಾವನೆ ನೀಡಿದ್ದು, ಇದಕ್ಕೆ ಪೂರಕವಾಗಿ ಸ್ಪಂದಿಸಿ ರೈಲ್ವೆ ಇಲಾಖೆ ಶಬರಿಮಲೆಗೆ ಹುಬ್ಬಳ್ಳಿಯಿಂದ ವಿಶೇಷ ರೈಲು ಸೇವೆ ಆರಂಭಿಸಿದೆ. ಈ ಮೂಲಕ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪ್ರಯಾಣಕ್ಕೆ ರೈಲ್ವೆ ಇಲಾಖೆ‌ ವಿಶೇಷವಾಗಿ ನೆರವಾಗಿದೆ. ನಮ್ಮ ಪ್ರಸ್ತಾವನೆಗೆ ಸ್ಪಂದಿಸಿ ರೈಲು ಸೇವೆ ಆರಂಭಿಸಿದ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಸಮಸ್ತ ಭಕ್ತವೃಂದದ ಪರವಾಗಿ ಧನ್ಯವಾದಗಳು” ಎಂದು ಬರೆಕೊಂಡಿದ್ದಾರೆ.