ಶಾಲೆಗಳಿಗಿಲ್ಲ ರಜೆ

Advertisement

ಧಾರವಾಡ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿದ್ದು, ಸೋಮವಾರ ಬೆಣ್ಣಿಹಳ್ಳ ಪ್ರವಾಹದಲ್ಲಿ ನಾಪತ್ತೆಯಾದ ವ್ಯಕ್ತಿಯ ಶೋಧ ಕಾರ್ಯ ಮುಂದುವರೆದಿದೆ.
ಬೆಣ್ಣಿ ಹಳ್ಳ ಹಾಗೂ ತುಪ್ಪರಿ ಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ‌ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ರಜೆ ಇಲ್ಲ…
ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಇದೆ‌. ಆದರೆ, ಶಾಲಾ-ಕಾಲೇಜುಗಳಿಗೆ ರಜೆ ನೀಡುವಷ್ಟು ಮಳೆ ಆಗಿಲ್ಲ. ಸಾರಿಗೆ ಸಂಚಾರ ಸೇರಿದಂತೆ ಎಲ್ಲವೂ ಸುಗಮವಾಗಿ ಸಾಗುತ್ತಿದೆ. ಹಾಗಾಗಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.