ಬೆಳಗಾವಿ: ಕರ್ನಾಟಕ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ(56) ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.
ಇತ್ತೀಚೆಗಷ್ಟೇ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಆನಂದ ಮಾಮನಿ ಅವರು, ಶೀಘ್ರದಲ್ಲೇ ಗುಣಮುಖವಾಗಿ ಜನ ಸೇವೆಗೆ ಬರುತ್ತೇನೆ, ಯಾರು ಆತಂಕಪಡಬೇಡಿ. ಊಹಾಪೋಹಗಳಿಗೆ ಕಿವಿಗೊಡಬೇಡಿ ನಾನು ಚೆನ್ನಾಗಿದ್ದೇನೆ ಎಂದಿದ್ದರು. ಆದರೆ, ಚಿಕಿತ್ಸೆ ಫಲಿಸದೇ ನಿಧನರಾದರು.