ಶೆಟ್ಟರ್ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ

ಕುಮಾರಸ್ವಾಮಿ
Advertisement

ಮಂಗಳೂರು: ಮಾಜಿ ಸಿಎಂ ಜಗದೀಶ್​ ಶೆಟ್ಟರ್ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ. ಸಣ್ಣವರು ಯಾರಾದರೂ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಯಾಕಂದ್ರೆ ನಮ್ಮದು ಸಣ್ಣ ಪಕ್ಷ. ನಮಗೆ ಅಂತಹ‌ ದೊಡ್ಡ ನಾಯಕರ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನವರು ಮಾತುಕತೆ ನಡೆಸಿದ್ರೆ ಅದು ಅವರಿಗೆ ಸೇರಿದ್ದು ನನಗೆ ಸಂಬಂಧ ಇಲ್ಲ ಎಂದರು.