ಟೀಂ ಇಂಡಿಯಾ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಇದೀಗ ಅವರ ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಈ ಸ್ಟಾರ್ ಮಹಿಳಾ ಆಟಗಾರ್ತಿ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಇದನ್ನು ಸ್ವತಃ ವೇದಾ ಕೃಷ್ಣಮೂರ್ತಿ ಅವರೇ ಬಹಿರಂಗಪಡಿಸಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡ ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದೆ. ಭಾರತೀಯ ಕ್ರಿಕೆಟಿಗರೊಬ್ಬರು ಸ್ಟಾರ್ ಆಲ್ ರೌಂಡರ್ ವೇದಾ ಕೃಷ್ಣಮೂರ್ತಿ ಅವರ ಹೃದಯ ಗೆದ್ದಿದ್ದಾರೆ. ವೇದಾ ಕೃಷ್ಣಮೂರ್ತಿ ಇಂಗ್ಲೆಂಡ್ ಪ್ರವಾಸದಲ್ಲಿ ತಂಡದ ಭಾಗವಾಗಿಲ್ಲ. ಆದರೂ ಎಲ್ಲೆಡೆ ಅವರದ್ದೇ ಸುದ್ದಿ.
ಆಲ್ ರೌಂಡರ್ ವೇದಾ ಕೃಷ್ಣಮೂರ್ತಿ ಅವರನ್ನು ಕರ್ನಾಟಕದ ಕ್ರಿಕೆಟಿಗ ಅರ್ಜುನ್ ಹೊಯ್ಸಳ ವರಿಸಲಿದ್ದಾರೆ. ಅರ್ಜುನ್ ಹೊಯ್ಸಳ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಈ ವಿಶೇಷ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಚಿತ್ರಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಡುತ್ತಿದ್ದಾರೆ.