ಸರಳ ನಗರ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಿ: ಸಿಎಂ

ಟೆಕ್‌
Advertisement

ಬೆಂಗಳೂರು: ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು. ಮೈಸೂರು ಮಹಾರಾಜರು ವಿಜ್ಞಾನ ತಂತ್ರಜ್ಞಾನಕ್ಕೆ , ಶಿಕ್ಷಣಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ‌ . ನಂತರ ಉದ್ಯಮಕ್ಕೆ ಆದ್ಯತೆ ನೀಡಿದ್ದಾರೆ. ಈಗ ಐಟಿ ಬಿಟಿ ಬಂದಿದೆ. ಬೆಂಗಳೂರಿಗೆ ಬಂದವರು ಐಟಿ ಬಿಟಿ ಕಂಪನಿಗಳಿಗೆ ಭೇಟಿ ನೀಡುತ್ತಾರೆ. ಮೊದಲು ಸಂಪತ್ತು ಉಳ್ಳವರ ಕಾಲವಿತ್ತು. ಈಗ ಜ್ಞಾನ ಇರುವವರ ಕಾಲ. ಬೆಂಗಳೂರಿಗೆ ಪ್ರತಿದಿನ 5000 ಕ್ಕೂ ಹೆಚ್ಚು ಇಂಜನೀಯರ್‌ಗಳು ಬಂದು ಹೋಗುತ್ತಾರೆ. ಬೆಂಗಳೂರಿನಲ್ಲಿ ಸುಮಾರು 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ.
ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ 40% ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.