ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನ ಆತ್ಮಹತ್ಯೆ

Advertisement

ವಿಜಯಪುರ: ಶಿಕ್ಷಕನೋರ್ವ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರವಿವಾರ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ. ಸಿಂದಗಿ ತಹಶೀಲ್ದಾರ್ ಕಚೇರಿಯ ಆವರಣದಲ್ಲಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಂದಗಿ ತಾಲೂಕಿನ ಸಾಸಾಬಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ್ ಎಂದು ಗುರುತಿಸಲಾಗಿದೆ. ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡ ಮುಖ್ಯ ಶಿಕ್ಷಕ ಬಸವರಾಜ ನಾಯ್ಕಲ್, ಸಿಂದಗಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು 4 ಜನರ ಮೇಲೆ ಪ್ರಕರಣ ದಾಖಲು ಆಗಿದ್ದು – ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಶಿಕ್ಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆಗೆ ಇಳಿದಿದ್ದಾರೆ.