ಮೈಸೂರು: ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ತೀವ್ರ ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಭವಾನಿ ರೇವಣ್ಣ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್‌ವೊಂದು ಡಿಕ್ಕಿ ಹೊಡೆದಿದೆ. ಇದರಿಂದ ಕೋಪಗೊಂಡ ಭವಾನಿ ರೇವಣ್ಣ ಅವರು ಬೈಕ್ ಸವಾರನಿಗೆ ಹಿಗ್ಗಾಮುಗ್ಗ ಜಾಡಿಸಿದ್ದಾರೆ. ಕಾರಿನ ಬೋರ್ಡ್‌ಗೆ ಡ್ಯಾಮೇಜ್ ಆಗಿದೆ ಎಂದು ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೋ ವೈರಲ್ ಆಗಿದೆ. ವಾಹನದ ಮುಂಭಾಗ ಡ್ಯಾಮೇಜ್ ಆಗಿರುವುದು ನೋಡಿದ ಭವಾನಿ ರೇವಣ್ಣ ಅವರು ಬೈಕ್ ಸವಾರನ ಮೊಬೈಲ್ ಕಸಿದುಕೊಂಡು ಬೈಕ್ ಕೀ ಕಿತ್ತುಕೊಂಡರು. ” ನಿನಗೆ ಅಂತಹ ಅರ್ಜೆಂಟ್ ಏನಿತ್ತು? ಗಾಡಿಗೆ ಎಷ್ಟು ಡ್ಯಾಮೇಜ್ ಆಗಿದೆ. ರೆಡಿ ಮಾಡಿಸುವುದು ಹೇಗೆ?’ ಎಂದು ಕೇಳಿದರು. ಅಲ್ಲದೇ, ‘ಬಿಟ್‌ಬಿಡಿ ಅಕ್ಕ’ ಎಂದು ಮಧ್ಯಪ್ರವೇಶಿಸಿದ ಸ್ಥಳೀಯರನ್ನು, ‘ಕೊಡ್ತಿಯಾ ₹ 50 ಲಕ್ಷ ರಿಪೇರಿ ಮಾಡಿಸೋಕೆ? ಸ್ಥಳದಲ್ಲಿರುವವರು ಹಣ ಕೊಡಂಗಿದ್ರೆ ನ್ಯಾಯ ಮಾತಾಡಕ್ಕೆ ಬನ್ನಿ’ ಎಂದು ಸೇರಿದ್ದವರನ್ನು ಕೂಡ ಭವಾನಿ ರೇವಣ್ಣ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ‘ದೇಶ ಮುಳುಗಿ ಹೋಗಿತ್ತಾ, ರೈಟಲ್ಲಿ ಬಂದು ಗುದ್ದಿದ್ದೀಯಲ್ಲಾ, ಒಂದೂವರೆ ಕೋಟಿ ಗಾಡಿ ಇದು. ಡ್ಯಾಮೇಜ್ ಮಾಡಿದ್ದೀಯಲ್ಲ, ಸಾಯಂಗಿದ್ರೆ ಬಸ್‌ಗೆ ಸಿಕ್ಕಾಕೊಂಡು ಸಾಯಬೇಕಿತ್ತು. ನನ್ನ ಕಾರ್ ಡ್ಯಾಮೇಜ್ ಮಾಡೋಕೆ ನೀನ್ಯಾವನು?’ ಎಂದು ವಾಹನ ಸವಾರರ ವಿರುದ್ಧ ಹರಿಹಾಯ್ದರು. ಘಟನೆಯ 15 ನಿಮಿಷಯಗಳ ಸಂಪೂರ್ಣ ವಿಡಿಯೋ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಪಘಾತದ ಬಳಿಕ ವಾಹನ ಸವಾರನ ಆರೋಗ್ಯ ವಿಚಾರಿಸದೇ ಕಾರಿನ ಬಗ್ಗೆ ಯೋಜಿಸಿದ ಭವಾನಿ ರೇವಣ್ಣ ವಿರುದ್ಧ ನೆಟ್ಟಿಗರು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.