ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್

BUS
Advertisement

ಬೆಂಗಳೂರು: ಸಾರಿಗೆ ನೌಕರರಿಗೆ ಮುಷ್ಕರ ನಡೆಸದಂತೆ ಹೈಕೋರ್ಟ್ ಬ್ರೇಕ್​​ ಹಾಕಿದೆ. 3 ವಾರಗಳ ಕಾಲ ಯಾವುದೇ ಮುಷ್ಕರ ನಡೆಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.
ಏಪ್ರಿಲ್ 6ರಂದು ಮುಂದಿನ ಸಭೆಯಿರುವ ಹಿನ್ನೆಲೆ‌ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್​ಗೆ ಹೆಚ್.ಎಂ. ವೆಂಕಟೇಶ್ ಎನ್ನುವವರು ಪಿಐಎಲ್​ ಸಲ್ಲಿಸಿದ್ದರು.
ನಾಳೆ ನಡೆಯಲಿರುವ ಮುಷ್ಕರದಿಂದ ಸಾರ್ವಜನಿಕ ಸಾರಿಗೆ ಸ್ಥಗಿತವಾಗಲಿದ್ದು, ಇದರಿಂದ ವಿದ್ಯಾರ್ಥಿಗಳು, ನೌಕರರು, ಪ್ರಯಾಣಿಕರಿಗೆ ತೊಂದರೆ ಉಂಟಾಗಲಿದೆ. ಮುಖ್ಯವಾಗಿ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಲಿದೆ. ಹೀಗಾಗಿ 3 ವಾರಗಳ ಕಾಲ ಮುಷ್ಕರಕ್ಕೆ ಮುಂದಾಗದಂತೆ ಸೂಚನೆ ನೀಡಲಾಗಿದೆ.