ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ) ಮುಖ್ಯ ಗೇಟ್‌ನಲ್ಲಿ ಕರ್ತವ್ಯದಲ್ಲಿದ್ದ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್(ಸಿಐಎಸ್‌ಎಫ್) ಇದರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ರಾಜಸ್ಥಾನದ ಭರತ್ ಪುರ ಜಿಲ್ಲೆಯ ಜ್ಯೋತಿ ಬಾಯಿ (೩೩) ಆತ್ಮಹತ್ಯೆಗೆ ಯತ್ನಿಸಿದ ಸಬ್ ಇನ್ಸ್‌ಪೆಕ್ಟರ್. ಇಂದು ಬೆಳಗ್ಗೆ ೬-೬.೧೫ರ ನಡುವೆ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿರುವ ಜ್ಯೋತಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ತನಿಖೆಯಂತೆ ಕೌಟುಂಬಿಕ ಕಾರಣಗಳಿಂದಾಗಿ ಜ್ಯೋತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಬರೆದಿದ್ದಾರೆ ಎನ್ನಲಾದ ನೋಟ್ ಪೊಲೀಸರಿಗೆ ಲಭ್ಯವಾಗಿದ್ದು, “ಜೀವನದಿಂದ ಮನಸು ತುಂಬಿದೆ. ನನ್ನ ಈ ಸ್ಥಿತಿಗೆ ನಾನೇ ಕಾರಣ” ಎಂದು ಹಿಂದಿಯಲ್ಲಿ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.