ಬಳ್ಳಾರಿ: ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ಅವರು ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ ಎಂದರು. ಅವರ ಹಾಗೆ ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ. ಸೌಭಾಗ್ಯ ಕೊಡುತ್ತೇವೆ ಎಂದು ಹೇಳಿ ದೌರ್ಭಾಗ್ಯ ನೀಡಿಲ್ಲ. ಈ ರೀತಿಯ ಕೆಲಸ ನಾವು ಮಾಡಿಲ್ಲ ಎಂದರು.