ಸಿದ್ದರಾಮಯ್ಯ ಕುಷ್ಟಗಿಯಿಂದ ಸ್ಪರ್ಧಿಸೋದಾದರೆ ಸ್ವಾಗತ : ಶಾಸಕ ಬಯ್ಯಾಪುರ

ಬಯ್ಯಾಪುರ್‌
Advertisement

ಕುಷ್ಟಗಿ: ನನ್ನ ರಾಜಕೀಯ ಜೀವನದ ಕೊನೆಯವರೆಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಹೊರತು ಬೇರೆ ಯಾವ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವುದಿಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008 ರಿಂದ ಇದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿಕೊಂಡು ಬಂದಿದ್ದೇನೆ. ನಾನು ಯಾವುದೇ ಕಾರಣಕ್ಕೂ ಕುಷ್ಟಗಿ ವಿಧಾನಸಭಾ ಕ್ಷೇತ್ರವನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಂದು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದವರು. ಹೀಗಾಗಿ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಹಕ್ಕನ್ನು ಅವರು ಪಡೆದುಕೊಂಡಿದ್ದು, ಅವರು ಒಂದು ಅಥವಾ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡಬಹುದು ಅಂದುಕೊಂಡಿದ್ದೇನೆ. ಈಗಾಗಲೇ ಹಲವಾರು ದಿನಗಳಿಂದ ಸಿದ್ದರಾಮಯ್ಯನವರು ಕುಷ್ಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಗಾಳಿ ಮಾತು ಹರಿದಾಡುತ್ತಿದ್ದು, ಅದು ನಿಜವಾದರೆ ಮನಃಪೂರ್ವಕ ಸ್ವಾಗತಿಸುವುದಾಗಿ ಹೇಳಿದರು.