ಮಾಜಿ ಸಿಎಂ ಸಿದ್ದರಾಮಯ್ಯನವರ ‘ಮುಸ್ಲಿಂ ಏರಿಯಾ’ ಹೇಳಿಕೆಗೆ ಇಂದು ತೀವ್ರ ವಿರೋಧ ವ್ಯಕ್ತವಾಗಿದೆ.
ಕೊಡಗು ಜಿಲ್ಲೆಯ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ತೆರಳುತ್ತಿದ್ದ ಸಿದ್ದರಾಮಯ್ಯನವರ ವಾಹನಕ್ಕೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಅಲ್ಲದೆ ತಿತಿಮತಿ ಮಾರ್ಗದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಮಡಿಕೇರಿಯ ತಿಮ್ಮಯ್ಯ ಸರ್ಕಲ್ ಬಳಿ ಬಿಜೆಪಿ ಹಾಗೂ ಹಿಂದೂ ಸಂಘಟನೆ ಸದಸ್ಯರು ಸಿದ್ದರಾಮಯ್ಯರ ಮೇಲೆ ಮೊಟ್ಟೆ ಎಸೆದು ಆಕ್ರೋಶ ಹೊರಹಾಕಿದ್ದಾರೆ.