ಹುಬ್ಬಳ್ಳಿ : ಕಳೆದ ಮಂಗಳವಾರ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ವೀರಾಪುರ ಓಣಿಯಲ್ಲಿನ ಕರಿಯಮ್ಮ ದೇವಸ್ಥಾನದಲ್ಲಿನ ಅಯ್ಯಪ್ಪಸ್ವಾಮಿ ಮಾಲಾದಾರಿಗಳು ಉಪಯೋಗಿಸುತ್ತಿದ್ದ ಸಿಲಿಂಡರ್ ಅನಿಲ ಸೋರಿಕೆಯಿಂದಾಗಿ ಏಕಾಏಕಿ ಸ್ಫೋಟಗೊಂಡಿತ್ತು. ಈ ಪರಿಣಾಮ ಮಗು ಸೇರಿದಂತೆ ನಾಲ್ಕು ಜನ ಗಂಭೀರವಾಗಿ ಗಾಯಗೊಂಡಿದ್ದರು.
ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಯತಿ ಬಿಜವಾಡ(೪) ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ ಮೃತಪಟ್ಟಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.