ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರ ನೇಮಿಸಿದ ಬೆನ್ನಲ್ಲೇ ಕೇಂದ್ರವು ಇಂದು ಮತ್ತೆ ಇಬ್ಬರು ಹೈಕೋರ್ಟ್ ನ್ಯಾಯಾಧೀಶರಿಗೆ ಬಡ್ತಿ ನೀಡಿದೆ ಈ ನೇಮಕಾತಿಯಿಂದ ಸುಪ್ರೀಂಕೋರ್ಟ್‌ಗೆ ಸಂಪೂರ್ಣ ಬಲ ಬಂದಂತಾಗಿದೆ.
ಈ ಬಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ‘ಭಾರತದ ಸಂವಿಧಾನದ ನಿಬಂಧನೆಗಳ ಪ್ರಕಾರ ಭಾರತದ ಗೌರವಾನ್ವಿತ ರಾಷ್ಟ್ರಪತಿಗಳು ಇಬ್ಬರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್, ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿದೆ. ಅವರಿಗೆ ನನ್ನ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ.