ಜಸ್ಟೀಸ್ ಡಿ.ವೈ. ಚಂದ್ರಚೂಡ್ ಅವರನ್ನು ಸುಪ್ರೀಂಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಕಿರಣ ರಿಜಿಜು ಮಾಹಿತಿ ನೀಡಿದ್ದಾರೆ. 50ನೇ ಸಿಜೆಐ ಆಗಿ ನೇಮಕವಾಗಿರುವ ಡಿವೈ ಚಂದ್ರಚೂಡ್ ಅವರು 2024ರ ನವೆಂಬರ್ 10ರಂದು ನಿವೃತ್ತರಾಗಲಿದ್ದಾರೆ.