ಸೆ.30ರಿಂದ ರಾಜ್ಯದಲ್ಲಿ ಭಾರತ್ ಜೋಡೋ

Advertisement

ಸೆ. 30ರಿಂದ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ಗಂಟೆಗೆ ಭಾರತ ಐಕ್ಯತಾ ಯಾತ್ರೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಅ. 2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ದಸರಾ ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಈಗಾಗಲೇ ಎಲ್ಲ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ರಾಹುಲ್ ಗಾಂಧಿ ಮುಂದಾಳತ್ವ ವಹಿಸಿ ನಿತ್ಯ 25 ಕಿ.ಮೀ ಸರಾಸರಿಯಲ್ಲಿ 150 ದಿನ ಪಾದಯಾತ್ರೆ ಮಾಡುತ್ತಿದ್ದಾರೆ. ಕನ್ಯಾಕುಮಾರಿಯಲ್ಲಿ ಆರಂಭವಾದ ಯಾತ್ರೆಗೆ ತಮಿಳುನಾಡು, ಕೇರಳದಲ್ಲಿ ಅಭೂತಪೂರ್ವ ಪ್ರತಿಕ್ರಿಯೆ ದೊರೆತಿದೆ. ನಮ್ಮ ನಿರೀಕ್ಷೆ ಮೀರಿ ಜನ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.