ಪೂಂಚ್: ಜಮ್ಮು ಮತ್ತು ಕಾಶ್ಮೀರದಲ್ಲಿ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ನಾಲ್ವರು ಯೋಧರು ಸಾವನ್ನಪ್ಪಿದ್ದಾರೆ. ಪೂಂಚ್ನ ಭಾಟಾ ದುರಿಯನ್ ಎಂಬಲ್ಲಿ ಈ ಭೀಕರ ಅವಘಡ ಸಂಭವಿಸಿದೆ. ಪರಿಹಾರ ಕಾರ್ಯಾಚರಣೆ ಚುರುಕಿನಿಂದ ಸಾಗಿದ್ದು ವಾಹನಕ್ಕೆ ಬೆಂಕಿ ಹೇಗೆ ಹೊತ್ತಿಕೊಂಡಿದೆ ಎಂಬುದು ತಿಳಿದುಬಂದಿಲ್ಲ. ಸೇನಾ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ.